ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರರಾಜಧಾನಿ ದೆಹಲಿಯ 7ನೇ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ದೆಹಲಿ ಉಪ ರಾಜ್ಯಪಾಲ ನಜೀಬ್ ಜಂಗ್ ಅವರು ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಅರವಿಂದ್ ಕೇಜ್ರಿವಾಲ್ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಕೇಜ್ರಿವಾಲ್ ಅವರೊಂದಿಗೆ ಸೋಮನಾಥ್ ಭಾರತಿ, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್, ರಾಖಿ ಬಿರ್ಲಾ, [...]
↧