ಬೆಂಗಳೂರು : ಬಿಜೆಪಿಯಲ್ಲಿ ಕೆಜೆಪಿ ವಿಲೀನವಾದ ಹಿನ್ನೆಲೆಯಲ್ಲಿ ಬಿಜೆಪಿಗೆ ಅಧಿಕೃತ ಪ್ರತಿಪಕ್ಷ ಸ್ಥಾನ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಮಾಡಿದ್ದಾರೆ. ಸ್ಪೀಕರ್ ಭೇಟಿ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಶೆಟ್ಟರ್ ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಮುಖಂಡ ಯಡಿಯೂರಪ್ಪ ಅವರು ಬಿಜೆಪಿಯಲ್ಲಿ ಕೆಜೆಪಿ ವಿಲೀನ ಮಾಡಲು ತೀರ್ಮಾನಿಸಿದ್ದಾರೆ. ಬಿಜೆಪಿ ಜತೆ ವಿಲೀನಕ್ಕೆ ಕೆಜೆಪಿ ಶಾಸಕರು ಒಪ್ಪಿದ್ದಾರೆ. ಇದರೊಂದಿಗೆ ಬಿಜೆಪಿ ಶಾಸಕರ ಸದಸ್ಯರ ಸಂಖ್ಯೆಯೂ ಹೆಚ್ಚಾಗಲಿದೆ. ಹೀಗಾಗಿ ವಿಪಕ್ಷ ಸ್ಥಾನ ಬಿಜೆಪಿಗೆ [...](Visited 10 times, 10 visits today)
↧